ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದ್ದು, ಕರ್ನಾಟಕ, ಒಡಿಶಾ, ಆಂಧ್ರ ಪ್ರದೇಶ ಸೇರಿ ಹಲವೆಡೆ ಶುಕ್ರವಾರ (ಅಕ್ಟೋಬರ್ 3) ಮಳೆಯಾಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ (Karnataka Weather). ಜತೆಗೆ ದಕ್ಷಿಣ ಮತ್ತು ಉತ್ತರ ಒಳನಾಡಿನ ವಿವಿಧ ಕಡೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಅಕ್ಟೋಬರ್ 8ರವರೆಗೆ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಇನ್ನು ಬೆಂಗಳೂರಿನಲ್ಲಿ ಶುಕ್ರವಾರದಿಂದ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ/ಗುಡುಗು ಸಹಿತ ಮಳೆಯಾಗಲಿದೆ. ಗಂಟೆಗೆ (30-40 ಕಿ.ಮೀ.) ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20°C ಹಾಗೂ 29°C ಆಗಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತಯ ಉತ್ತರ ಕನ್ನಡ ಜಿಲ್ಲೆಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನು ಕಲಬುರಗಿ, ಬೀದರ್, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಲವೆಡೆ ಬಿರುಗಾಳಿ ಸಹಿತ ಸಾಧಾರಣ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಕಟಣೆ ತಿಳಿಸಿದೆ.
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು (ನಗರ/ಗ್ರಾಮಾಂತರ), ರಾಮನಗರ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ/ಗುಡುಗು ಸಹಿತ ಮಳೆಯಾಗಲಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಯಲ್ಲೂ ಹಗುರ ಮಳೆಯಾಗಲಿದೆ.
ಈ ಸುದ್ದಿಯನ್ನೂ ಓದಿ: Kodi Mutt Swamiji Predictions: ಸಿಎಂ ಸಿದ್ದರಾಮಯ್ಯ ಸರಕಾರದ ಬಗ್ಗೆ ಕೋಡಿಮಠ ಸ್ವಾಮೀಜಿ ಭವಿಷ್ಯ
ಗುಡುಗು ಸಹಿತ ಮಳೆ
ಅಕ್ಟೋಬರ್ 4ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅಕ್ಟೋಬರ್ 5ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.