ರಾಜ್ಯಾದ್ಯಂತ ಇಂದಿನ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆ?
Karnataka Weather: ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರಿದಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ (Heavy rain) ಮತ್ತೆ ಮುಂದುವರಿದಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ. ಧಾರವಾಡ ಮತ್ತು ಗದಗದ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Vitamin C: ಮಳೆಗಾಲ ಮತ್ತು ರೋಗನಿರೋಧಕ ಶಕ್ತಿ: ಮಳೆಗಾಲದಲ್ಲಿ ವಿಟಮಿನ್ C ಏಕೆ ಮುಖ್ಯ?
ಬೆಳಗಾವಿ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ಇಂದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ವಿಜಯಪುರ, ಕಲಬುರಗಿ, ಬಾಗಲಕೋಟೆ, ರಾಯಚೂರು, ಬೀದರ್ ಮತ್ತು ಯಾದಗಿರಿ: ಈ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದ ನಿರಂತರ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದ ವಿವಿಧ ಭಾಗಗಳು ಸೇರಿದಂತೆ ದಕ್ಷಿಣ ಭಾರತ ಹಾಗೂ ಉತ್ತರ ಭಾರತದ ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಇದರ ಪರಿಣಾಮವಾಗಿ ಕರ್ನಾಟಕವೂ ಸೇರಿದಂತೆ ಭಾರತದ 14 ರಾಜ್ಯಗಳಲ್ಲಿ ಭಾರೀ ಮಳೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.