ಇಂದು ರಾಜ್ಯದ ಹವಾಮಾನ ಹೇಗಿರಲಿದೆ? ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ?
Karnataka Weather: ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕೆಲವೆಡೆ ಗುಡುಗು, ಸಿಡಿಲು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲಿಯೂ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕೆಲವೆಡೆ ಗುಡುಗು, ಸಿಡಿಲು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ (Karnataka Weather) ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲಿಯೂ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡು ಭಾಗದಲ್ಲಿ ಸಹ ಹಗುರದಿಂದ ಸಾಧಾರಣ ಮಳೆಯಾಗಲಿದೆ, ಆದರೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಹೆಚ್ಚಿರಲಿದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಜುಲೈ 28ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾದರೆ ಬಯಲು ಸೀಮೆಯಲ್ಲಿ ಕೊಂಚ ಬಿಸಿಲು ಇರಲಿದೆ. ಜುಲೈ 26ರಂದು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಂತಹ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 25 ರಂದು ಹಾಗೂ ಜುಲೈ 28 ರಿಂದ 31 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ ಬಹುಪಾಲು ದಿನಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದಂತೆ ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಗದಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
Karnataka Weather: ಇಂದು ಬೆಂಗಳೂರು, ಕರಾವಳಿ ಸೇರಿ ವಿವಿಧೆಡೆ ಸುರಿಯಲಿದೆ ಮಳೆ; ನಿಮ್ಮೂರಿನ ಹವಾಮಾನ ಹೇಗಿರಲಿದೆ?
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.