ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸೆಪ್ಟೆಂಬರ್‌ ಮೊದಲ ವಾರದಲ್ಲಿ ಯಾವ ಯಾವ ಜಿಲ್ಲೆಯಲ್ಲಿ ಮಳೆ? ಹವಾಮಾನ ಇಲಾಖೆಯ ಮುನ್ಸೂಚನೆ ಏನು?

Karnataka Weather: ಸೆಪ್ಟೆಂಬರ್‌ ತಿಂಗಳಿನಲ್ಲಿಯೂ ರಾಜ್ಯದಲ್ಲಿ ಮಳೆಯಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದೆ. ಸೆಪ್ಟೆಂಬರ್ 2ರಿಂದ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಾಗಿದೆ. ಉತ್ತರ ಒಳನಾಡು ಕರ್ನಾಟಕದಲ್ಲಿಯೂ ಇಂದು ಕೆಲವು ಕಡೆ ಮಳೆಯ ಸಾಧ್ಯತೆ ಇದೆ.

ಸೆಪ್ಟೆಂಬರ್‌ ಮೊದಲ ವಾರದಲ್ಲಿ ಯಾವ ಯಾವ ಜಿಲ್ಲೆಯಲ್ಲಿ ಮಳೆ?

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Sep 2, 2026 10:38 AM

ಬೆಂಗಳೂರು: ಸೆಪ್ಟೆಂಬರ್‌ ತಿಂಗಳಿನಲ್ಲಿಯೂ ರಾಜ್ಯದಲ್ಲಿ ಮಳೆಯಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲ ಭಾಗಗಳಲ್ಲಿ (Heavy Rain) ಮಳೆಯಾಗುತ್ತಿದೆ. ಸೆಪ್ಟೆಂಬರ್ 2ರಿಂದ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಾಗಿದೆ. ಉತ್ತರ ಒಳನಾಡು (Karnataka Weather) ಕರ್ನಾಟಕದಲ್ಲಿಯೂ ಇಂದು ಕೆಲವು ಕಡೆ ಮಳೆಯ ಸಾಧ್ಯತೆ ಇದೆ. ಹಾವೇರಿ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಹೆಚ್ಚಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಬಹುದು.

ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶದ ಬಳ್ಳಾರಿ ಜಿಲ್ಲೆಯಲ್ಲಿ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

Vitamin C: ಮಳೆಗಾಲ ಮತ್ತು ರೋಗನಿರೋಧಕ ಶಕ್ತಿ: ಮಳೆಗಾಲದಲ್ಲಿ ವಿಟಮಿನ್ C ಏಕೆ ಮುಖ್ಯ?

ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು ಸುಧಾರಿಸಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಹಾಗೂ ಮಾಪನ ಕೇಂದ್ರಗಳ ಇಂದಿನ (ಸೆಪ್ಟೆಂಬರ್ 02) ಮಾಹಿತಿಯಂತೆ, ಬೆಂಗಳೂರಿನ ಸರಾಸರಿ AQI 50 ರಿಂದ 65 ರಷ್ಟಿದ್ದು ‘ಸಾಧಾರಣ’ ಹಾಗೂ ‘ಉತ್ತಮ’ ವಿಭಾಗದಲ್ಲಿದೆ. ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಕರ್ನಾಟಕದ ಹಲವು ಪ್ರಮುಖ ನಗರಗಳಲ್ಲಿಯೂ ವಾಯು ಗುಣಮಟ್ಟ ಉತ್ತಮ ಮಟ್ಟದಲ್ಲಿದೆ.