Karnataka Weather: ಇಂದು ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ ಸಾಧ್ಯತೆ
Karnataka Weather Report: ಜೂನ್ 21ರಿಂದ 23ವರೆಗೆ ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಶನಿವಾರ ಭರ್ಜರಿ ಮಳೆಯಾಗಿದೆ. ಇದೇ ರೀತಿ ಮುಂದಿನ ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ವರುಣ ಆರ್ಭಟಿಸುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ಹೊತ್ತಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29° ಸೆ. ಮತ್ತು 21° ಸೆ. ಇರುವ ಸಾಧ್ಯತೆ ಇದೆ.
ಇಂದು (ಜೂನ್ 21) ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಜೂನ್ 21ರಿಂದ 23ವರೆಗೆ ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಜೂನ್ 24ರವರೆಗಿನ ಹವಾಮಾನ ವರದಿ
ಜೂನ್ 22ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದಲ್ಲ ಒಂದು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜೂನ್ 23ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
Vishwavani Health: ಉಪಹಾರಕ್ಕೆ ಇಡ್ಲಿ ಸಾಂಬಾರ್ ಬೆಸ್ಟ್; ವೈದ್ಯರು ಹೀಗೆನ್ನುವುದೇಕೆ?
ಜೂನ್ 24ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.