ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದು (ಜೂನ್ 27) ಭರ್ಜರಿ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ಹಾವೇರಿ ಸೇರಿ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇಂದು ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿ ಇನ್ನುಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31°C ಮತ್ತು 21°C ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ:
ಮುಂದಿನ 4 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಜೂನ್ 30ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀನಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಜೂನ್ 28ಕ್ಕೆ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!
ಇನ್ನು ಜೂನ್ 28ರಂದು ಕೂಡ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ಹಾವೇರಿ ಸೇರಿ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ.
Health Tips: 30ರ ಹರೆಯದಲ್ಲಿದ್ದೀರಾ? ನಿಮ್ಮ ಆರೋಗ್ಯ ಕಾಪಾಡಲು ತಜ್ಞರ ಈ ಟಿಪ್ಸ್ ಪಾಲಿಸಿ!
ಜೂನ್ 29ರಂದು ಕರಾವಳಿ ಜಿಲ್ಲೆಗಳು ಹಾಗೂ ಜೂನ್ 30ರಂದು ಕರಾವಳಿ ಜಿಲ್ಲೆಗಳು, ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.