Thursday, 1st December 2022

ಹಾಸನ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ರದ್ದು

ಹಾಸನ : ಹಾಸನ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಜಿಲ್ಲೆಯಲ್ಲಿ ಕರೋನಾ ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಲು ಸರ್ಕಾರ ಸೂಚನೆ ನೀಡಿತ್ತು. ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಾದರೆ ಮತ್ತೆ ಕರ್ಫ್ಯೂ ಜಾರಿಗೊಳಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ಆರ್ ಗಿರೀಶ್ ವೀಕೆಂಡ್ ಕರ್ಪ್ಯೂ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.