Wednesday, 28th July 2021

ಬಿಜೆಪಿಯಲ್ಲಿ ಬಿಎಸ್’ವೈ ಬಿಟ್ಟರೆ ಬೇರೆ ಲೀಡರ್‌ ಯಾರಿದ್ದಾರೆ?: ಎಂ.ಪಿ.ಕುಮಾರಸ್ವಾಮಿ

ಚಿಕ್ಕಮಗಳೂರು: ಬಿ.ಎಸ್.ಯಡಿಯೂರಪ್ಪ ಬಿಟ್ಟು ಬಿಜೆಪಿಯಲ್ಲಿ ಯಾರು ಸ್ಟಾರ್ ಲೀಡರ್ ಇದ್ದಾರೆ? ನಾಯಕತ್ವ ಬದಲಾವಣೆ, ಚರ್ಚೆ ಈಗ ಅಪ್ರಸ್ತುತ ಎಂದು ಗುರುವಾರ ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಎಸ್ ವೈ ಪರ ಬ್ಯಾಟ್ ಬೀಸಿದ್ದಾರೆ.

ಈ ಕುರಿತು ಕೇಂದ್ರದ ನಾಯಕರ ಬಳಿ ಶಾಸಕರ ನಿಯೋಗ ಹೋಗಲು ತಯಾರಿದ್ದೇವೆ. ನಾಯಕತ್ವ ಬದಲಾವಣೆ ಮಾಡದಂತೆ ಮನವಿ ‌ಮಾಡುತ್ತೇವೆ. ನಾಯಕತ್ವ ಬದಲಾಯಿಸುವುದು ದೊಡ್ಡ ವಿಚಾರವಲ್ಲ. ಬೇರೆ ಸ್ಟಾರ್ ಲೀಡರ್ ಯಾರಿದ್ದಾರೆ ತೋರಿಸಲಿ. ಕರೋನಾ ಹತೋಟಿಗೆ ತರಲು ಸಿಎಂ ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಾಯಕತ್ವದ ಬದಲಾವಣೆ ಚರ್ಚೆ ಅಪ್ರಸ್ತುತ. ಯಡಿಯೂರಪ್ಪನವರೇ ಮುಂದುವರೆಯಬೇಕು ಎಂದು ಹೇಳುತ್ತೇವೆ.

ದಕ್ಷಿಣ ಭಾರತದಲ್ಲಿ 2 ಬಾರಿ ಬಿಜೆಪಿ ಅಧಿಕಾರಕ್ಕೆ ತರಲು ಯಡಿಯೂರಪ್ಪನವರೇ ಕಾರಣ ಎಂದು ಶಾಸಕ ಎಂ.ಪಿ. ಕುಮಾರ ಸ್ವಾಮಿ ಹೇಳಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *