Tuesday, 21st March 2023

35 ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ವರ್ಕ್‌ ಫ್ರಂ ಹೋಮ್‌

ಮಂಗಳೂರು : ಜಿಲ್ಲೆಯಲ್ಲಿ ಕರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 35 ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಏ.30ರವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.

ಮಂಗಳೂರು ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ಅವರು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗರ್ಭಿಣಿ ಮಹಿಳೆಯರು ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ತಾಯಂದಿರಿಗೆ, ಆರೋಗ್ಯದ ಹಿತ ದೃಷ್ಠಿಯಿಂದ ಮನೆಯಿಂದಲೇ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ಮೂಲಕ ಕರ್ತವ್ಯ ನಿರ್ವಹಿಸುವಂತೆ ಅವಕಾಶ ಕಲ್ಪಿಸ ಲಾಗಿದೆ.

ಮೊದಲ ಕರೋನಾ ಅಲೆಯ ಸಂದರ್ಭದಲ್ಲಿ 300ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕರೋನಾ ಸೋಂಕು ತಗುಲಿತ್ತು.

error: Content is protected !!